Pages

05 February 2014

Aralutiro-Mungaru male

ಅರಳುತಿರು ಜೀವದ ಗೆಳೆಯ ಸ್ನೇಹದಾ ಸಿಂಚನದಲ್ಲಿಬಾಡದಿರು ಸ್ನೇಹದ ಹೂವೆ ಪ್ರೇಮದಾ ಬಂಧನದಲ್ಲಿ
ಮನಸಲ್ಲಿ ಇರಲಿ ಭಾವನೆ
ಮಿಡಿಯುತಿರಲಿ ಮೌನ ವೀಣೆ..
ಹೀಗೆ ಸುಮ್ಮನೆ.....

ಹಕ್ಕಿಯು ಹಾಡಿದೆ ತನ್ನ ಹೆಸರನು ಹೇಳದೆ
ಸಂಪಿಗೆ ಬೀರಿದೆ ಕಂಪನು ಯಾರಿಗೂ ಹೇಳದೆ
ಬೀಸುವ ಗಾಳಿಯ ಹಕ್ಕಿಯ ಹಾಡಿನ ನಂಟಿಗೆ ಹೆಸರಿನ ಹಂಗಿಲ್ಲ
ನಮಗೇಕೆ ಅದರ ಯೋಚನೆ
ಬೇಡ ಗೆಳೆಯ ನಂಟಿಗೆ ಹೆಸರು..
ಯಾಕೆ ಸುಮ್ಮನೆ.....

ಮಾತಿಗೆ ಮೀರಿದ ಭಾವದ ಸೆಳೆತವೇ ಸುಂದರ
ಒಲುಮೆಯು ತುಂಬಿದ ಮನಸಿಗೆ ಬಾರದು ಬೇಸರ
ಬಾಳ ದಾರಿಯಲಿ ಬೇರೆಯಾದರು ಚಂದಿರ ಬರುವನು ನಮ್ಮ ಜೊತೆ
ಕಾಣುವೆನು ಅವನಲ್ಲಿ ನಿನ್ನನು
ಇರಲಿ ಗೆಳೆಯ ಈ ಅನುಬಂಧ
ಹೀಗೆ ಸುಮ್ಮನೆ.....

No comments:

Post a Comment